ಲೂಕ 23:5 - ಕನ್ನಡ ಸತ್ಯವೇದವು C.L. Bible (BSI)5 ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ತೆನಿ, “ಅನಿ ಜೊರಾನ್ ಸಗ್ಳ್ಯಾ ಜುದೆಯಾತ್ಲ್ಯಾ ಲೊಕಾಕ್ನಿ ಶಿಕ್ವುನ್ಗೆತ್, ಹ್ಯೊ ಲೊಕಾತ್ನಿ ಡಂಗೊ ಉಟ್ವುಲಾ, ತೆನಿ ಅಪ್ನಾಚೆ ಹೆ ಕಾಮ್ ಗಾಲಿಲಿಯಾತ್ನಾ ಚಾಲು ಕರಲ್ಲ್ಯಾನ್, ಅನಿ ಅತ್ತಾ ತೊ, ಹಿತ್ತೆ ಯೆವ್ನ್ ಪಾವ್ಲಾ” ಮನುಕ್‍ಲಾಲೆ. ಅಧ್ಯಾಯವನ್ನು ನೋಡಿ |