Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:56 - ಕನ್ನಡ ಸತ್ಯವೇದವು C.L. Bible (BSI)

56 ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಬಳಿಕ ಆ ಸ್ತ್ರೀಯರು ಯೇಸುವಿನ ದೇಹಕ್ಕೆ ಹಚ್ಚಲು ಪರಿಮಳದ್ರವ್ಯಗಳನ್ನು ಸಿದ್ಧಮಾಡುವುದಕ್ಕಾಗಿ ಹೊರಟುಹೋದರು. ಸಬ್ಬತ್ ದಿನದಲ್ಲಿ ಅವರು ವಿಶ್ರಮಿಸಿಕೊಂಡರು. ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಸಬ್ಬತ್‌ದಿನದಂದು ಜನರೆಲ್ಲರೂ ವಿಶ್ರಾಂತಿ ತೆಗೆದುಕೊಳ್ಳಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ತೆನಿ ಘರಾಕ್ ಗೆಲ್ಯಾನಿ, ಅನಿ ಜೆಜುಚ್ಯಾ ಮಡ್ಯಾಕ್ ಲಾವುಕ್ ಮನುನ್, ಬರಿ ವಾಸ್ ಯೆತಲಿ ತೆಲಾ, ಅನಿ ಮಡ್ಯಾಕ್ ಲಾವ್ತಲಿ ತೆಲಾ ತೆನಿ ತಯಾರ್ ಕರ್‍ಲ್ಯಾನಿ. ಸಬ್ಬತಾಚ್ಯಾ ದಿಸಿ ದೆವಾಚ್ಯಾ ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ತೆನಿ ಅರಾಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:56
9 ತಿಳಿವುಗಳ ಹೋಲಿಕೆ  

ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.


ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.


ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.


ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು