ಲೂಕ 23:7 - ಕನ್ನಡ ಸತ್ಯವೇದವು C.L. Bible (BSI)7 ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜೆಜು ಹೆರೊದಾಚ್ಯಾ ಅದಿಕಾರಾತ್ ಹೊತ್ತ್ಯಾ ಜಾಗ್ಯಾವೈಲೊ ಮನುನ್ ಕಳಲ್ಲ್ಯಾ ತನ್ನಾ, ಪಿಲಾತಾನ್ ಜೆಜುಕ್ ಹೆರೊದಾಕ್ಡೆ ಧಾಡುನ್ ದಿಲ್ಯಾನ್. ತನ್ನಾ ಹೆರೊದ್ ಜೆರುಜಲೆಮಾತುಚ್ ಹೊತ್ತೊ. ಅಧ್ಯಾಯವನ್ನು ನೋಡಿ |