Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:32 - ಕನ್ನಡ ಸತ್ಯವೇದವು C.L. Bible (BSI)

32 ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ತೆನಿ ಎಕಾಮೆಕಾಕ್ನಿ,“ ವಾಟೆನ್ ಯೆತಾನಾ ತೊ ಅಮ್ಚೆಕ್ಡೆ ಬೊಲುನ್ಗೆತ್ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಸಾಂಗುನ್ಗೆತ್ ಯೆತಾನಾ, ಅಮ್ಚ್ಯಾ ಭುತ್ತುರುಚ್ ಎಕ್ ಆಗ್ ಪೆಟ್ಲ್ಯಾ ಸರ್ಕೆ ಹೊಯ್ನಶಿ ಕಾಯ್?” ಮನುನ್ ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:32
14 ತಿಳಿವುಗಳ ಹೋಲಿಕೆ  

ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II


ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?


ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.


ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು