Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:39 - ಕನ್ನಡ ಸತ್ಯವೇದವು C.L. Bible (BSI)

39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. (

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನನ್ನನ್ನು ಮುಟ್ಟಿನೋಡಿರಿ, ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು; ಅವು ಭೂತಕ್ಕಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾಜ್ಯಾ ಹಾತಾಕ್ನಿ, ಅನಿ ಪಾಯಾಕ್ನಿ ಬಗಾ, ಅನಿ ಬರೆ ಕರುನ್ ಬಗಾ, ಮಿಯಾಚ್ ತೊ, ಮಾಕಾ ಅಪ್ಡುನ್ ಬಗಾ ತುಮ್ಕಾ ಕಳ್ತಾ. ಎಕ್ ಭುತಾಕ್ ಮಾಕಾ ಹೊತ್ತ್ಯಾ ಸರ್ಕೆ ಮಾಸ್ ಅನಿ ಹಡ್ಡಾ ರ್‍ಹಾಯ್ನಾತ್.” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:39
12 ತಿಳಿವುಗಳ ಹೋಲಿಕೆ  

ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?


ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು