Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:44 - ಕನ್ನಡ ಸತ್ಯವೇದವು C.L. Bible (BSI)

44 ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮಾನಾ ತೆನಿ, “ಮಿಯಾ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ತನ್ನಾಚ್ ಮೊಯ್ಜೆಚ್ಯಾ ಪುಸ್ತಾಕಾತ್ನಿ, ಪ್ರವಾದ್ಯಾನಿ ಲಿವಲ್ಲ್ಯಾ ಪುಸ್ತಾಕಾತ್ನಿ, ಅನಿ ಕಿರ್ತನಾತ್ನಿ ಜೆ ಕಾಯ್ ಮಾಜ್ಯಾ ವಿಶಯಾತ್ ಲಿವಲ್ಲೆ ಹಾಯ್, ತೆ ಖರೆ ಹೊವ್ಕ್ ಪಾಜೆ ಮನುನ್ ಹೆ ಸಗ್ಳೆ ತುಮ್ಕಾ ಸಾಂಗಟಲ್ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:44
88 ತಿಳಿವುಗಳ ಹೋಲಿಕೆ  

“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;


ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.


ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ" ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.


ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.


“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


ಆದುದರಿಂದ ಪ್ರವಾದಿಗಳ ಈ ಮಾತುಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು