Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:5 - ಕನ್ನಡ ಸತ್ಯವೇದವು C.L. Bible (BSI)

5 ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಸ್ತ್ರೀಯರು ಭಯಹಿಡಿದವರಾಗಿ ತಲೆ ತಗ್ಗಿಸಿಕೊಂಡು ನಿಂತಿರುವಾಗ ಆ ಪುರುಷರು ಅವರಿಗೆ, “ಸತ್ತವರೊಳಗೆ ಬದುಕಿರುವವನನ್ನು ಹುಡುಕುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸ್ತ್ರೀಯರು ಬಹಳವಾಗಿ ಹೆದರಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬಗ್ಗಿಸಿಕೊಂಡು ನಿಂತರು. ಆ ಮನುಷ್ಯರು, “ಬದುಕಿರುವ ವ್ಯಕ್ತಿಯನ್ನು ಇಲ್ಲಿ ಹುಡುಕುವುದೇಕೆ? ಇದು ಸತ್ತ ಜನರನ್ನು ಇಡುವ ಸ್ಥಳ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಂಕಾ ಬಗುನ್ ಭಿಂವ್ನ್ ತ್ಯಾ ಬಾಯ್ಕೊಮನ್ಸಾ ಜಿಮ್ನಿರ್ ಡಬ್ ಪಡ್ಲ್ಯಾ ತನ್ನಾ ತ್ಯಾ ಮಾನ್ಸಾನಿ ಝಿತ್ತೊ ಹೊತ್ತ್ಯಾಕ್, ಮರಲ್ಲ್ಯಾತ್ನಿ ಯೆವ್ನ್ ಕಶ್ಯಾಕ್ ಹುಡ್ಕುಕ್ ಲಾಗ್ಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:5
15 ತಿಳಿವುಗಳ ಹೋಲಿಕೆ  

ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.


ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.


ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.


ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.


ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.


ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ,


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು