Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:16 - ಕನ್ನಡ ಸತ್ಯವೇದವು C.L. Bible (BSI)

16 ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ಜುವಾಂವಾಕ್ ತೆಂಕಾ “ಮಿಯಾ ತುಮ್ಕಾ ಪಾನಿಯಾನ್ ಬಾಲ್ತಿಮ್ ದಿವ್ಲಾ ಖರೆ ಮಾಜ್ಯಾ ಮಾನಾ ಎಕ್ಲೊ ಯೆತಲೊ ಹಾಯ್ ತೊ ಮಾಜೆನ್ಕಿ ಲೈ ಮೊಟೊ, ತೆಚ್ಯಾ ವ್ಹಾನಾಚಿ ನಾಡಿ ಸೊಡ್ತಲಿ ಸೈತ್ ಮಾಕಾ ಮರ್‍ಯಾದ್ ನಾ, ತೊ ತುಮ್ಕಾ ಪವಿತ್ರ್ ಆತ್ಮ್ಯಾನ್ ಅನಿ ಆಗಿನ್ ಬಾಲ್ತಿಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:16
24 ತಿಳಿವುಗಳ ಹೋಲಿಕೆ  

ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.


ಪ್ರತ್ಯುತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.


ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.


ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.


ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು