Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:23 - ಕನ್ನಡ ಸತ್ಯವೇದವು C.L. Bible (BSI)

23 ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಯೇಸು ಯೋಸೇಫನ ಮಗನೆಂದು ಜನರು ಭಾವಿಸಿದ್ದರು. ಯೋಸೇಫನು ಹೇಲಿಯ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುನ್ ತೆಚೆ, ಬರಿ ಖಬರ್ ಸಿಕ್ವುತಲೆ ಕಾಮ್ ಸುರು ಕರ್‍ತಾನಾ, ತೊ ತಿಸ್ ವರ್ಸಾಂಚೊ ಹೊತ್ತೊ, ಲೊಕಾ ಜೆಜು ಎಲಿಚ್ಯಾ ಲೆಕಾಚೊ ಜುಜೆಚೊ ಲೆಕ್ ಮನುನ್ ಯವ್ಜಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:23
20 ತಿಳಿವುಗಳ ಹೋಲಿಕೆ  

ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.


ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.


ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.


ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;


ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.


ಎಲಿಯಕೀಮ್ ಮೆಲೆಯಾನಿಗೆ, ಮೆಲೆಯಾ ಮೆನ್ನನಿಗೆ, ಮೆನ್ನ ಮತ್ತಾಥನಿಗೆ, ಮತ್ತಾಥ ನಾತಾನನಿಗೆ, ನಾತಾನ್ ದಾವೀದನಿಗೆ ಹುಟ್ಟಿದರು.


ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.


ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು