ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು.
ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.
ಆದರೆ ಅದು ಕೈಯನ್ನು ಹಿಂದಕ್ಕೆ ತೆಗೆದುಕೊಂಡಿತು. ಅದರೊಡನೆ ಇದ್ದ ಇನ್ನೊಂದು ಕೂಸು ಹೊರಗೆ ಬಂದಿತು. ಇದನ್ನು ಕಂಡ ಸೂಲಗಿತ್ತಿ, “ನೀನು ಕಿತ್ತುಕೊಂಡು ಬಂದಿರುತ್ತೀಯಲ್ಲಾ,” ಎಂದಳು. ಈ ಕಾರಣ ಆ ಮಗುವಿಗೆ ‘ಪೆರೆಚ್’ ಎಂದು ಹೆಸರಾಯಿತು.
ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. "ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ" ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.