ಲೂಕ 3:8 - ಕನ್ನಡ ಸತ್ಯವೇದವು C.L. Bible (BSI)8 ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ‘ಅಬ್ರಹಾಮನು ನಮ್ಮ ತಂದೆ’ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತುಮಿ ತುಮ್ಚ್ಯಾ ಪಾಪಾನಿತ್ನಾ, ಬರ್‍ಯಾ ವಾಟೆಕ್ ಪರತ್ಲ್ಯಾಶಿ, ಮನುನ್ ದಾಕ್ವುನ್ ದಿತಲಿ ಕಾಮಾ ಕರಾ, ಅನಿ ತುಮ್ಚ್ಯಾ-ತುಮ್ಚ್ಯಾ ಮದ್ದಿ ಅಮ್ಚೊ ಅದ್ಲೊ ಬಾಬಾ ಅಬ್ರಾಹಾಮ್ ಹಾಯ್, ಮನುನ್ ಸಾಂಗುಕ್ ಜಾವ್‍ನಕಾಶಿ. ಅಬ್ರಾಹಾಮಾಕ್ ಹ್ಯಾ ಗುಂಡ್ಯಾನಿತ್ನಾ ಸೈತ್ ಪಿಳ್ಗಿ ಕರುನ್ ದಿವ್ಕ್ ದೆವಾಕ್ ಹೊತಾ? ಅಧ್ಯಾಯವನ್ನು ನೋಡಿ |