ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.
ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.
ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.
ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.
ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?