Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:16 - ಕನ್ನಡ ಸತ್ಯವೇದವು C.L. Bible (BSI)

16 ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ತಾನು ಬೆಳೆದ ನಜರೇತ್ ಎಂಬ ಊರಿಗೆ ಪ್ರಯಾಣ ಮಾಡಿದನು. ವಾಡಿಕೆಯ ಪ್ರಕಾರ, ಆತನು ಸಬ್ಬತ್‌ದಿನದಲ್ಲಿ ಸಭಾಮಂದಿರಕ್ಕೆ ಹೋದನು. ಯೇಸು ಓದುವುದಕ್ಕಾಗಿ ಎದ್ದುನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ಜೆಜು ಅಪ್ನಿ ಬಾರಿಕ್-ಹೊತ್ತೊ ಮೊಟೊ ಹೊಲ್ಲೆ ಗಾಂವ್ , ನಜರೆತಾಕ್ ಗೆಲೊ, ಅನಿ ಸದ್ದಿಚ್ಯಾ ಬಾಸೆನ್ ಸಿನಾಗೊಗಾತ್ ಗೆಲೊ ಅನಿ ವಾಚ್ವುಕ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:16
14 ತಿಳಿವುಗಳ ಹೋಲಿಕೆ  

ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.


ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು.


ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ!


ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು:


ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು