ಲೂಕ 4:18 - ಕನ್ನಡ ಸತ್ಯವೇದವು C.L. Bible (BSI)18 “ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪವಿತ್ರ್ ಆತ್ಮೊ ಮಾಜೆ ವರ್‍ತಿ ಹಾಯ್ ಕಶ್ಯಾಕ್ ಮಟ್ಲ್ಯಾರ್ ಗರಿಬಾಕ್ನಿ ಬರಿ ಖಬರ್ ಹಾನುಕ್ ಮನುನ್, ತೆನಿ ಮಾಕಾ ಎಚುನ್ ಕಾಡ್ಲ್ಯಾನಾಯ್. ಗುಲಾಮ್ಗಿರಿತ್ ಹೊತ್ತ್ಯಾಕ್ನಿ ಸುಟ್ಕಾ ಯೆಲಾ, ಅನಿ ಕುಡ್ಡಾಕ್ನಿ ದಿಸ್ಟ್ ಯೆಲಾ ಮನುನ್ ಸಾಂಗುಕ್ ತೆನಿ ಮಾಕಾ ಧಾಡುನ್ ದಿಲ್ಯಾನಾಯ್. ಅಡ್ಚನಿತ್ ಹೊತ್ತ್ಯಾಕ್ನಿ ಸುಟ್ಕಾ ದಿತಲೊ. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.