Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:22 - ಕನ್ನಡ ಸತ್ಯವೇದವು C.L. Bible (BSI)

22 ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಂಕಾ ಸಗ್ಳ್ಯಾಕ್ನಿ ಹೆ ಲೈ ಬರೆ ದಿಸ್ಲೆ, ಅನಿ ಎವ್ಡ್ಯಾ ಬುದ್ವಂತ್ಕಿನ್ ಬೊಲಲ್ಲ್ಯಾ ಬರ್‍ಯಾ ಗೊಸ್ಟಿಯಾ ಆಯ್ಕುನ್, ತೆನಿ ಅಜಾಪ್ ಹೊಲೆ. ತನ್ನಾ ತೆನಿ “ಹ್ಯೊ ಜುಜೆಚೊ ಲೆಕ್ ನ್ಹಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:22
20 ತಿಳಿವುಗಳ ಹೋಲಿಕೆ  

ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.


ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II


ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.


ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು