Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:7 - ಕನ್ನಡ ಸತ್ಯವೇದವು C.L. Bible (BSI)

7 ನೀನು ನನಗೆ ಅಡ್ಡಬಿದ್ದೆಯಾದರೆ ಇದೆಲ್ಲಾ ನಿನ್ನದಾಗುವುದು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವದು ಎಂದು ಆತನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನನ್ನನ್ನು ಆರಾಧಿಸುವುದಾದರೆ ಇವೆಲ್ಲವನ್ನು ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ತಿಯಾ ಮಾಜ್ಯಾ ಪಾಯಾ ಪಡ್ಲ್ಯಾರ್ ಹೆ ಸಗ್ಳೆ ಮಿಯಾ ತುಕಾ ದಿತಾ” ಮಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:7
11 ತಿಳಿವುಗಳ ಹೋಲಿಕೆ  

ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.


ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


“ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು