Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:17 - ಕನ್ನಡ ಸತ್ಯವೇದವು C.L. Bible (BSI)

17 ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಕ್ ದಿಸ್ ಜೆಜು ಲೊಕಾಕ್ನಿ ಶಿಕ್ವುತಾನಾ ಉಲ್ಲೆ ಫಾರಿಜೆವ್, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಗಾಲಿಲಿಯಾಚ್ಯಾ ಅನಿ ಜುದೆಯಾಚ್ಯಾ ಸಗ್ಳ್ಯಾ ಗಾಂವಾನಿತ್ನಾ, ಅನಿ ಜೆರುಜಲೆಮ್ ಶಾರಾತ್ನಾ ಯೆಲ್ಲ್ಯಾನಿ. ತೆನಿಬಿ, ತ್ಯಾ ಲೊಕಾತ್ನಿ ಬಸಲ್ಲ್ಯಾನಿ. ಸರ್ವೆಸ್ವರಾನ್ ಜೆಜುಕ್ ಶಿಕ್ ಹೊತ್ತ್ಯಾಕ್ನಿ ಗುನ್ ಕರ್‍ತಲಿ ತಾಕತ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:17
20 ತಿಳಿವುಗಳ ಹೋಲಿಕೆ  

ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.


ಅದಕ್ಕೆ ಯೇಸು, “ಯಾರೋ ನನ್ನನ್ನು ಮುಟ್ಟಿದ್ದಾರೆ. ಗುಣಪಡಿಸುವ ಶಕ್ತಿ ನನ್ನಿಂದ ಹೊರಹೊಮ್ಮಿದೆ ಎಂದು ನನಗೆ ಗೊತ್ತು,” ಎಂದರು.


ದೇವರು ಪೌಲನ ಕೈಯಿಂದ ಅಸಾಧಾರಣ ಅದ್ಭುತಗಳನ್ನು ಮಾಡಿಸುತ್ತಿದ್ದರು.


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು.


ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.


ಬಳಿಕ ಜೆರುಸಲೇಮಿನಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯ ಬಳಿಗೆ ಬಂದು,


ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.


ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.


ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.


ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು