Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಗೆನೇಜರೆತ್ ಕೆರೆಯ ಅಂಚಿನಲ್ಲಿ ನಿಂತಿದ್ದ ಆತನು ಆ ಕೆರೆಯ ದಡದಲ್ಲಿ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸರೋವರದ ದಡದಲ್ಲಿ ನಿಂತಿದ್ದ ಎರಡು ದೋಣಿಗಳನ್ನು ಯೇಸು ನೋಡಿದನು. ಬೆಸ್ತರು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಸೊಳ್ಯಾ ಧರ್‍ತಲ್ಯಾನಿ ದೊನ್ ಢೊನಾ ವೊಡುನ್ ದಂಡೆಕ್ ಹಾನುನ್ ಥವ್ನ್: ಅಪ್ನಾಚಿ ಜಾಳಿ ಧುತಲೆ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:2
7 ತಿಳಿವುಗಳ ಹೋಲಿಕೆ  

ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು.


ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.


ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.


ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು