Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:22 - ಕನ್ನಡ ಸತ್ಯವೇದವು C.L. Bible (BSI)

22 ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ನೀವು ಆ ರೀತಿ ಯೋಚಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುಕ್ ತೆನಿ ಯವಜ್ತಲೆ ಕಳ್ಳೆ, ತನ್ನಾ ತೆನಿ “ತುಮಿ ತಸ್ಲೆ ಸಗ್ಳೆ ಕಶ್ಶಾಕ್ ಯವ್ಜುಕ್ ಲಾಗ್ಲ್ಯಾಸಿ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:22
15 ತಿಳಿವುಗಳ ಹೋಲಿಕೆ  

ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?


ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು