Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:26 - ಕನ್ನಡ ಸತ್ಯವೇದವು C.L. Bible (BSI)

26 ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಗ್ಳೆ ಜಾನಾ ಎಗ್ದಮ್ ಅಜಾಪ್ ಹೊಲೆ, ಅನಿ “ಕಸ್ಲೆ ಮೊಟೆ ವಿಚಿತ್ರ್ ಅಮಿ ಬಗಟ್ಲ್ಯಾವ್” ಮನುನ್ಗೆತ್ ಭಿಂಯಾನ್ ತೆನಿ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:26
13 ತಿಳಿವುಗಳ ಹೋಲಿಕೆ  

ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.


ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!", ಎಂದು ದೇವರನ್ನು ಕೊಂಡಾಡಿದರು.


ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.


“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.


ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು