Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:29 - ಕನ್ನಡ ಸತ್ಯವೇದವು C.L. Bible (BSI)

29 ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಲೆವಿನ್ ಅಪ್ನಾಚ್ಯಾ ಘರಾತ್ ಜೆಜುಕ್ ಅನಿ ತೆಚ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾ ವಾಂಗ್ಡಿಯಾಕ್ನಿ, ಅನಿ ದುಸ್ರ್ಯಾ ಲೊಕಾಕ್ನಿ ಮಿಳುನ್ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:29
9 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು.


ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.


ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.


ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.


ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.


ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು