Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:32 - ಕನ್ನಡ ಸತ್ಯವೇದವು C.L. Bible (BSI)

32 ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಮಿಯಾ ಧರ್ಮಾನಿ ಚಲ್ತಲ್ಯಾ ಲೊಕಾಕ್ನಿ, ಮನ್ ಬದ್ಲುಕ್ ಮನುನ್ ಬಲ್ವುಕ್ ಯೆವ್ಕ್ ನಾ, ಪಾಪಿ ಲೊಕಾಕ್ನಿ ಮನ್ ಬದ್ಲುಕ್ ಬಲ್ವುಕ್ ಮನುನ್ ಯೆಲಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:32
26 ತಿಳಿವುಗಳ ಹೋಲಿಕೆ  

ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ;


“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು