ಲೂಕ 5:33 - ಕನ್ನಡ ಸತ್ಯವೇದವು C.L. Bible (BSI)33 “ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಆತನಿಗೆ - ಯೋಹಾನನ ಶಿಷ್ಯರು ಪದೇಪದೇ ಉಪವಾಸಗಳನ್ನೂ ವಿಜ್ಞಾಪನೆಗಳನ್ನೂ ಮಾಡುತ್ತಾ ಇದ್ದಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ, ಕುಡಿಯುತ್ತಾರೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಉಲ್ಲ್ಯಾ ಲೊಕಾನಿ ಜೆಜುಕ್ “ಜುವಾಂವಾಚಿ ಶಿಸಾ ಪದೆ ಉಪಾಸ್ ಕರ್‍ತ್ಯಾತ್, ಮಾಗ್ನಿ ಕರ್‍ತ್ಯಾತ್, ಅನಿ ಫಾರಿಜೆವಾಂಚಿ ಶಿಸಾಬಿ ತಸೆಚ್ ಕರ್‍ತ್ಯಾತ್. ಖರೆ ತುಜಿ ಶಿಸಾ ಖಾವ್ನಗೆತ್-ಫಿವ್ನಗೆತ್ ರ್‍ಹಾತ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |