Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:34 - ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೇಸು ಅವರಿಗೆ - ಮದಲಿಂಗನು ಮದುವೇಜನರ ಸಂಗಡ ಇರುವಲ್ಲಿ ಅವರಿಗೆ ಉಪವಾಸಮಾಡಿಸುವದಕ್ಕೆ ನಿಮ್ಮಿಂದಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು ಅವರಿಗೆ, “ಮದುವೆಯಲ್ಲಿ ಮದುಮಗನ ಸಂಗಡ ಇರುವ ಅವನ ಸ್ನೇಹಿತರಿಗೆ ನೀವು ಉಪವಾಸಮಾಡಿ ಎಂದು ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತನ್ನಾ ಜೆಜುನ್ “ಎಕ್ ಲಗ್ನಾಚ್ಯಾ ಕಾರೆವಾಕ್ ಮನುನ್ ಯಲ್ಲೆ ಸೊಯ್ರೆ.ಲಗ್ನಾಚೊ ನ್ಹವ್ರೊ ಅಪ್ನಾಚ್ಯಾ ವಾಂಗ್ಡಾ ರಾತಾನಾ ಉಪ್ಪಾಸಿ ರ್‍ಹಾವ್ಕ್ ಹೊತಾ ಕಾಯ್? ನಾ-ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:34
18 ತಿಳಿವುಗಳ ಹೋಲಿಕೆ  

ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ :


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.


“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.


ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು