Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:5 - ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ಸೀಮೋನನು - ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಹಾಕುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಸಿಮಾವಾನ್ “ಗುರುಜಿ, ಸಗ್ಳಿ ರಾತ್‍ಬರ್ ಅಮಿ ಕಾಮ್ ಕರ್ಲಾಂವ್, ಖರೆ ಅಮ್ಕಾ ಎಕ್‍ಬಿ ಮಾಸೊಳಿ ಗಾವುಕ್‍ನಾ, ಖರೆ ತಿಯಾ ಸಾಂಗುಕ್ ಲಾಗ್ಲೆ ಮನುನ್ ಮಿಯಾ ಜಾಳಿ ಘಾಲ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:5
14 ತಿಳಿವುಗಳ ಹೋಲಿಕೆ  

ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ.


ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.


‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.


ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.


ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.


ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು