Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಸೆ ಮನುನ್, ತೆನಿ ಸೊನ್ನಿ ಕರುನ್, ಅನಿದುಸ್ರ್ಯಾ ಢೊನಿತ್ಲ್ಯಾಕ್ನಿಬಿ ಬಲ್ವುಲ್ಯಾನಿ, ತೆನಿಬಿ ಯೆಲ್ಯಾನಿ ಅನಿ ದೊನಿಬಿ ಢೊನಿಯಾತ್ನಿ ಮಾಸೊಳ್ಯಾ ಭರ್‍ಲ್ಯಾನಿ, ದೊನಿಬಿ ಢೊನಿಯಾ ಬುಡುಕ್ ಯೆಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:7
9 ತಿಳಿವುಗಳ ಹೋಲಿಕೆ  

ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.


ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು.


ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.


ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.


ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು