Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:8 - ಕನ್ನಡ ಸತ್ಯವೇದವು C.L. Bible (BSI)

8 ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 ಇದನ್ನು ಕಂಡ ಬೆಸ್ತರಿಗೆಲ್ಲಾ ವಿಸ್ಮಯವಾಯಿತು. ಸೀಮೋನ್ ಪೇತ್ರನಂತೂ ಯೇಸುವಿನ ಮುಂದೆ ಮೊಣಕಾಲೂರಿ “ಪ್ರಭುವೇ ನನ್ನನ್ನು ಬಿಟ್ಟುಹೋಗು, ನಾನು ಪಾಪಿಯಾಗಿದ್ದೇನೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆ ಸಗ್ಳೆ ಬಗಟಲ್ಲೆಚ್, ಸಿಮಾವ್ ಪೆದ್ರುನ್ ಜೆಜುಚ್ಯಾ ಇದ್ರಾಕ್ ಡೊಗ್ಲಾ ಟೆಕ್ಲ್ಯಾನ್ ಅನಿ “ಧನಿಯಾ, ಮಾಜೆಕ್ನಾ ಧುರ್ ಜಾ, ಮಿಯಾ ಎಕ್ ಪಾಪಿ ಮಾನುಸ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:8
19 ತಿಳಿವುಗಳ ಹೋಲಿಕೆ  

ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.


ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.


ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.


ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು