Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:12 - ಕನ್ನಡ ಸತ್ಯವೇದವು C.L. Bible (BSI)

12 ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ದಿಸ್ ಜೆಜು ಮಾಗ್ನಿ ಕರುಕ್ ಮನುನ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೆನಿ ದೆವಾಕ್ಡೆ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:12
23 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.


ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.


ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.


ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.


ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು