Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:13 - ಕನ್ನಡ ಸತ್ಯವೇದವು C.L. Bible (BSI)

13 ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದಿಸ್ ಉಜ್ವಾಡಲ್ಲ್ಯಾ ತನ್ನಾ ಅಪ್ನಾಚ್ಯಾ ಸಗ್ಳ್ಯಾ ಶಿಸಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್ ಅನಿ ಅಪೊಸ್ತಲಾ ಮನುನ್ ನಾವ್ ದಿಲ್ಲ್ಯಾ ಬಾರಾ ಜಾನಾಕ್ನಿ ತೆನಿ ಎಚುನ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:13
20 ತಿಳಿವುಗಳ ಹೋಲಿಕೆ  

ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;


ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,


ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು