Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:20 - ಕನ್ನಡ ಸತ್ಯವೇದವು C.L. Bible (BSI)

20 ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಬಗಟ್ಲ್ಯಾನ್ ಅನಿ, ಗರಿಬಾನೊ ತುಮಿ ಸುಖಿ; ದೆವಾಚೊ ರಾಜ್ ತುಮ್ಚೊಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:20
35 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.


ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II


ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು