ಲೂಕ 6:22 - ಕನ್ನಡ ಸತ್ಯವೇದವು C.L. Bible (BSI)22-23 ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 “ಮಾನ್ಸಾಚ್ಯಾ ಲೆಕಾಕ್ ಲಾಗುನ್ ಲೊಕಾನಿ ತುಮ್ಕಾ ದ್ವೆಸ್ ಕರ್ಲ್ಯಾರ್, ಮರ್ಯಾದ್ ದಿನಸ್ಲ್ಯಾರ್, ತುಮ್ಚಿ ಮರ್ಯಾದ್ ಕಾಡ್ಲ್ಯಾರ್, ಅನಿ ತುಮಿ ವಾಯ್ಟ್ ಮನುನ್ ಸಾಂಗ್ಲ್ಯಾರ್ ತುಮಿ ಕವ್ಡೆ ಸುಖಿ!” ಅಧ್ಯಾಯವನ್ನು ನೋಡಿ |