Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:24 - ಕನ್ನಡ ಸತ್ಯವೇದವು C.L. Bible (BSI)

24 “ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖ ನಿಮಗೆ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದರೆ ಐಶ್ವರ್ಯವಂತರೇ, ನಿಮಗೆ ಕಷ್ಟ, ಏಕೆಂದರೆ ನೀವು ನಿಮ್ಮ ನೆಮ್ಮದಿಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಖರೆ ಅತ್ತಾ ಸಾವ್ಕಾರ್‍ಕಿನ್ ಜಿವನ್ ಕರ್‍ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮ್ಚೆ ಸುಖಾಚೆ ಜಿವನ್ ತುಮ್ಕಾ ಗಾವುನ್ ಹೊಲೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:24
20 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು