Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:25 - ಕನ್ನಡ ಸತ್ಯವೇದವು C.L. Bible (BSI)

25 ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಡುವಿರಿ ಮತ್ತು ಅಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಅತ್ತಾ ಖಾವ್ಕ್-ಜೆವ್ಕ್ ಸಗ್ಳೆ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಉಪ್ಪಾಸಿ ಪಡ್ತ್ಯಾಶಿ! ಅತ್ತಾ ಹಾಸುನ್ಗೆತ್ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಮರ್‍ಗುನ್-ಮರ್‍ಗುನ್ಗೆತ್ ರಡ್ತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:25
33 ತಿಳಿವುಗಳ ಹೋಲಿಕೆ  

ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು.


ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಬಾಲಕಿ ಸತ್ತುಹೋಗಿರುವುದನ್ನು ಅರಿತಿದ್ದ ಜನರು ಯೇಸುವನ್ನು ಪರಿಹಾಸ್ಯ ಮಾಡತೊಡಗಿದರು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ಮೂಢರ ನಗೆಚಾಟಿಕೆ, ಮಡಕೆಯಡಿ ಉರಿವ ಮುಳ್ಳುಕಡ್ಡಿಯ ಚಟಪಟ. ಇದೂ ಸಹ ನಿರರ್ಥಕ.


ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ..


“ನಗೆ ಹುಚ್ಚುತನ, ಸುಖಭೋಗ ನಿಷ್ಪ್ರಯೋಜಕ” ಎಂದುಕೊಂಡೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II


ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.


“ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು