Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:26 - ಕನ್ನಡ ಸತ್ಯವೇದವು C.L. Bible (BSI)

26 ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ಸಗ್ಳಿ ಲೊಕಾ ತುಮ್ಚ್ಯಾ ಬರೆಪಾನಾಚ್ಯಾ ವಿಶಯಾತ್ ಬೊಲ್ತಲ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತೆಂಚ್ಯಾ ಅದ್ಲ್ಯಾ ವಾಡ್ ವಡ್ಲಾನಿ ಝುಟ್ಯಾ ಪ್ರವಾದ್ಯಾಕ್ನಿಬಿ ತಸೆಚ್ ಬರೆ-ಬರೆ ಬೊಲಲ್ಲ್ಯಾನಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:26
18 ತಿಳಿವುಗಳ ಹೋಲಿಕೆ  

ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು