Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:29 - ಕನ್ನಡ ಸತ್ಯವೇದವು C.L. Bible (BSI)

29 ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕೊನ್ ತರ್ ತುಮ್ಚ್ಯಾ ಎಕ್ ಗಾಲಾ ವರ್‍ತಿ ಮಾರ್‍ಲ್ಯಾರ್ ಅನಿ ಎಕ್ ಗಾಲಾ ವರ್‍ತಿ ತೆಕಾ ಮಾರುಕ್ ಸೊಡಾ; ಕೊನ್ ತರ್ ತುಮ್ಚಿ ವೈಲಿ ಅಂಗಿ ಕಾಡುನ್ ಘೆವ್‍ಲಾಲ್ಯಾರ್, ತುಮ್ಚಿ ಭುತ್ತುರ್ಲಿ ಅಂಗಿಬಿ ತೆಕಾ ನ್ಹೆವ್ಕ್ ಸೊಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:29
15 ತಿಳಿವುಗಳ ಹೋಲಿಕೆ  

ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?


ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.


ಕಣ್ಣಿಗೆ ಬಟ್ಟೆ ಕಟ್ಟಿ, “ನಿನ್ನನ್ನು ಹೊಡೆದವರಾರು? ಪ್ರವಾದಿಸು,” ಎಂದು ಕೇಳುತ್ತಿದ್ದರು.


ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,


ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.


ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು