Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:35 - ಕನ್ನಡ ಸತ್ಯವೇದವು C.L. Bible (BSI)

35 “ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತುಮ್ಚ್ಯಾ ದುಸ್ಮಾನಾಂಚೊ ಪ್ರೆಮ್ ಕರಾ ಅನಿ ತೆಂಕಾ ಬರೆ ಕರಾ; ಪರ್‍ತುನ್ ಅನಿ ಘೆತಲಿ ಆಸ್ಯಾ ನಸ್ತಾನಾ ರಿನ್ ದಿವಾ, ತನ್ನಾ ತುಮ್ಕಾ ಭೊಮಾನ್ ಗಾವ್ತಾ, ಅನಿ ತುಮಿ ಲೈ ಮೊಟ್ಯಾ ದೆವಾಚಿ ಪೊರಾ ಹೊತ್ಯಾಶಿ. ತೆಕಾ ಪಾಪಿ ಅನಿ ಬುರ್ಶಿ ಲೊಕಾಬಿ ಬರಿಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:35
21 ತಿಳಿವುಗಳ ಹೋಲಿಕೆ  

ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು