Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:36 - ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮ್ಮ ತಂದೆ ಕರುಣವುಳ್ಳವನಾಗಿರುವ ಪ್ರಕಾರವೇ ನೀವೂ ಕರುಣವುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಿಮ್ಮ ಪರಲೋಕದ ತಂದೆಯು ಕರುಣಾಮಯನಾಗಿರುವಂತೆ ನೀವೂ ಕರುಣೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತುಮ್ಚೊ ಸರ್‍ಗಾ ವೈಲೊ ಬಾಬಾ ಕಸೊ ದಯಾ ದಾಕ್ವುನಾರೊ ತಸೆ ತುಮಿಬಿ ದಯಾ ದಾಕ್ವುತಲಿ ಲೊಕಾ ಹೊವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:36
7 ತಿಳಿವುಗಳ ಹೋಲಿಕೆ  

ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು