Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:37 - ಕನ್ನಡ ಸತ್ಯವೇದವು C.L. Bible (BSI)

37 “ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 “ದುಸ್ರ್ಯಾಂಚಿ ನಿತ್ ಕರುನಕಾಸಿ,ಅನಿ ದೆವ್‍ಬಿ ತುಮ್ಚಿ ನಿತ್ ಕರಿನಾ.ದುಸ್ರ್ಯಾಕ್ನಿ ಚುಕಿದಾರ್ ಮನುನ್ ಸಾಂಗುನಕಾಸಿ, ಅನಿ ದೆವ್ ತುಮ್ಕಾಬಿ ಚುಕಿದಾರ್ ಮನಿನಾ; ದುಸ್ರ್ಯಾಕ್ನಿ ಮಾಪ್ ಕರಾ, ಅನಿ ದೆವ್ ತುಮ್ಕಾಬಿ ಮಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:37
21 ತಿಳಿವುಗಳ ಹೋಲಿಕೆ  

ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,


ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.


ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು