Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:38 - ಕನ್ನಡ ಸತ್ಯವೇದವು C.L. Bible (BSI)

38 ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ದುಸ್ರ್ಯಾಕ್ನಿ ದಿವಾ,ಅನಿ ದೆವ್ ತುಮ್ಕಾ ದಿತಾ.ಹೆಚ್ಯಾ ಬದ್ಲಾಕ್, ಮಾಪ್ ಭರುನ್ ತುಮ್ಕಾ ದಿವ್ನ್ ಹೊತಾ,ತುಮ್ಚ್ಯಾ ಪೊಶಾತ್ ಭರುನ್ ಪಡಿಸರ್ಕೆ ತುಮ್ಕಾ ಗಾವ್ತಾ, ಖಲ್ಯಾ ಮಾಪಾನ್ ತುಮಿ ದುಸ್ರ್ಯಾಕ್ನಿ ದಿತ್ಯಾಶಿ ತ್ಯಾಚ್ ಮಾಪಾನ್ ದೆವ್ ತುಮ್ಕಾ ಮೆಜುನ್ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:38
29 ತಿಳಿವುಗಳ ಹೋಲಿಕೆ  

ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.


“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು,


ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು