ಲೂಕ 6:42 - ಕನ್ನಡ ಸತ್ಯವೇದವು C.L. Bible (BSI)42 ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಅಶೆ ರಾತಾನಾ ತುಜ್ಯಾ ಡೊಳ್ಯಾತ್ಲೊ ಮೊಟೊ ನಾಕ್ಡಾಚೊ ತುಕ್ಡೊ ತುಕಾ ದಿಸಿನಾ ತರ್ ಭಾವಾ ತುಜ್ಯಾ ಡೊಳ್ಯಾತ್ಲೊ ಕಚ್ರೊ ಕಾಡುಂವಾ ಯೆ ಮನುನ್ ತಿಯಾ ಕಶೆ ಮನುಕ್ ಹೊತಾ? ಕುಸ್ಡ್ಯಾ! ಅದ್ದಿ ತುಜ್ಯಾ ಡೊಳ್ಯಾತ್ ಹೊತ್ತೊ ಮೊಟೊ ತುಕ್ಡೊ ಕಾಡುನ್ ಘೆ, ಮಾನಾ ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಕಚ್ರೊ ತುಕಾ ಬರೊ ದಿಸ್ತಾ ತನ್ನಾ ತೊ ತುಕಾ ಕಾಡುಕ್ ಹೊತಾ”. ಅಧ್ಯಾಯವನ್ನು ನೋಡಿ |