Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:45 - ಕನ್ನಡ ಸತ್ಯವೇದವು C.L. Bible (BSI)

45 ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಎಕ್ ಬರೊ ಮಾನುಸ್ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವಲ್ಲೆ ಬರೆಚ್ ಅಪ್ನಾಚ್ಯಾ ಮನಾತ್ನಾ ಭಾಯ್ರ್ ಕಾಡ್ತಾ, ಎಕ್ ಬುರ್ಸೊ ಮಾನುಸ್ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವಲ್ಲೆ ಬುರ್ಶೆಚ್ ಅಪ್ನಾಚ್ಯಾ ಮನಾತ್ನಾ ಭಾಯ್ರ್ ಕಾಡ್ತಾ. ಜೆ ಕಾಯ್ ಮನಾತ್ ಹಾಯ್ ತೆಚ್ ತೊಂಡಾತ್ನಾ ಭಾಯ್ರ್ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:45
31 ತಿಳಿವುಗಳ ಹೋಲಿಕೆ  

ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II


ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು