“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.
ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.
ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;