Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:8 - ಕನ್ನಡ ಸತ್ಯವೇದವು C.L. Bible (BSI)

8 ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜೆಜುಕ್ ತೆನಿ ಯವಜಲ್ಲೆ ಕಳ್ಳೆ, ಅನಿ ತೆನಿ ತ್ಯಾ ಮಾನ್ಸಾಕ್ “ಉಟ್, ಅನಿ ಹಿಕ್ಡಿ ಫಿಡೆ ಯೆ”, ಮಟ್ಲ್ಯಾನ್, ತೊ ಮಾನುಸ್ ಉಟ್ಲೊ, ಅನಿ ಫಿಡೆ ಯೆವ್ನ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:8
19 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.


ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.


ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು.


ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು