ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.