Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:12 - ಕನ್ನಡ ಸತ್ಯವೇದವು C.L. Bible (BSI)

12 ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ತ್ಯಾ ಗಾಂವಾಂಚ್ಯಾ ಯೆಶಿತ್ ಪಾವಲ್ಲ್ಯಾ ತನ್ನಾ, ಲೊಕಾ ಎಕಾ ಮಾನ್ಸಾಕ್ ಮಾಟಿ ದಿವ್ಕ್ ಮನುನ್ ಗಾವಾತ್ನಾ ಭಾಯ್ರ್ ಯೆವ್‍ಲಾಗಲ್ಲಿ. ಮರಲ್ಲೊ ಮಾನುಸ್ ಎಕ್ ಘೊಮರಲ್ಲ್ಯಾ ಬಾಯ್ಕೊಮನ್ಸಿಚೊ ಎಕ್ಲೊಚ್ ಲೆಕ್, ಗಾವಾತ್ಲ್ಯಾ ಲೊಕಾಂಚೊ ಮೊಟೊ ತಾಂಡೊ ತಿಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:12
20 ತಿಳಿವುಗಳ ಹೋಲಿಕೆ  

ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.


ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.


ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.


ಇದಾದನಂತರ ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು.


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು