Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:14 - ಕನ್ನಡ ಸತ್ಯವೇದವು C.L. Bible (BSI)

14 ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜು ಫಿಡೆ ಗೆಲೊ, ಅನಿ ಮರ್‍ನಾಚ್ಯಾ ಪೆಟಿಕ್ ಅಪಡ್ಲ್ಯಾನ್, ತನ್ನಾ ಪೆಟಿ ವಾವುನ್ ಘೆಟಲ್ಲಿ ಲೊಕಾ ಇಬೆ ರ್‍ಹಾಲಿ, ತನ್ನಾ ಜೆಜುನ್ “ದಾಂಡ್ಗ್ಯಾ ಮಾನ್ಸಾ, ಮಿಯಾ ತುಕಾ ಸಾಂಗ್ತಾ ವೈರ್ ಉಟ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:14
20 ತಿಳಿವುಗಳ ಹೋಲಿಕೆ  

ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.


ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.


ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.


ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.


ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.


ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು.


ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).


ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,


ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.


ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು