ಲೂಕ 7:22 - ಕನ್ನಡ ಸತ್ಯವೇದವು C.L. Bible (BSI)22 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆಜುನ್ ಜುವಾಂವಾಚ್ಯಾ ಶಿಸಾಕ್ನಿ “ಜಾಂವಾ, ಅನಿ ಹಿತ್ತೆ ಬಗಟಲ್ಲೆ, ಅನಿ ಆಯ್ಕಲ್ಲೆ, ಜುವಾಂವಾಕ್ ಸಾಂಗಾ: ಕುಡ್ಡೆ ಬಗ್ತ್ಯಾತ್, ಸೊಟ್ಟೊ ಚಲ್ತಾ, ಕುಸ್ಟ್ ರೊಗ್ ಹೊತ್ತೆ ಪವಿತ್ರ್ ಹೊತ್ಯಾತ್, ಕಿಂವ್ಡೆ ಆಯಿಕ್ತ್ಯಾತ್, ಮರಲ್ಲೆ ಝಿತ್ತೆ ಹೊತ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊತಾ. ಅಧ್ಯಾಯವನ್ನು ನೋಡಿ |