Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:24 - ಕನ್ನಡ ಸತ್ಯವೇದವು C.L. Bible (BSI)

24 ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೋಹಾನನ ಶಿಷ್ಯರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ಏನು ನೋಡಬೇಕೆಂದು ಮರುಭೂಮಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೋಹಾನನ ದೂತರು ಹಿಂತಿರುಗಿ ಹೋಗಲು ಆತನು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ - ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜುಂವಾವಾಚಿ ಶಿಸಾ ಪರ್ತುನ್ ಗೆಲ್ಲ್ಯಾ ತನ್ನಾ, ಜೆಜುನ್ ಜುವಾಂವಾಚ್ಯಾ ವಿಶಯಾತ್ ಲೊಕಾನಿಕ್ಡೆ ಬೊಲುಕ್ ಚಾಲು ಕರ್‍ಲ್ಯಾನ್: ತುಮಿ ಹಾಳ್‍ ಜಾಗ್ಯಾರ್ ಜುವಾಂವಾಕ್ ಮಿಳುಕ್‍ ಗೆಲ್ಲ್ಯಾ ತನ್ನಾ, ಕಾಯ್ ಬಗುಕ್ ಮನುನ್ ಗೆಲ್ಲ್ಯಾಶಿ? ಎಕ್ ಕರಾಡಾಚಿ ಕಾಡಿ ವಾರ್ಯಾಕ್ ಬಾಗ್ತಲೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:24
14 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.


ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.


ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.


ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.


ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.


ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.


ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.


ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು