Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:29 - ಕನ್ನಡ ಸತ್ಯವೇದವು C.L. Bible (BSI)

29 ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆಕಾ ಆಯ್ಕಲ್ಲೆ ಸಗ್ಳ್ಯಾ ಲೊಕಾನಿ, ಅನಿ ತ್ಯಾತುರುಚ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ದೆವಾಚ್ಯಾ ಬರ್‍ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊಲ್ಯಾನಿ, ಅನಿ ಜುವಾಂವಾಕ್ನಾ ಬಾಲ್ತಿಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:29
15 ತಿಳಿವುಗಳ ಹೋಲಿಕೆ  

ಅನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದಾಗ,


ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.


ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.


ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು