Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:30 - ಕನ್ನಡ ಸತ್ಯವೇದವು C.L. Bible (BSI)

30 ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಫಾರಿಜೆವಾನಿ, ಅನಿ ಖಾಯ್ದೆ ಶಿಕ್ವುತಲ್ಯಾನಿ, ಅಪ್ನಾಸಾಟ್ನಿಚ್ ಮನುನ್ ಹೊತ್ತ್ಯಾ ದೆವಾಚ್ಯಾ ಯವ್ಜನ್ಯಾಕ್ನಿ, ತೆನಿ ಮರ್ಯಾದ್‍ ದಿವ್ಕನ್ಯಾತ್, ಅನಿ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ನಕ್ಕೊ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:30
11 ತಿಳಿವುಗಳ ಹೋಲಿಕೆ  

“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.


‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?


ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು